ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ; ಸಿಎಂ ಸಿದ್ಧರಾಮಯ್ಯ.

ಕರ್ನಾಟಕದ ವರ್ಷಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರೆಗೆ ₹13,000 ಕೋಟಿ ಹಣ ನೀಡಿದ್ದೇವೆ. ಕೊಟ್ಟ ಭರವಸೆಯಂತೆ ನಡೆದುಕೊಂಡಿದ್ದೇವೆ. ಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಮಂಡಳಿಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಲೇ ಇದೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ದೇಶದಲ್ಲಿ ಬೆಲೆ ಏರಿಕೆಗೆ ಪಿಎಂ ಮೋದಿ ಅವರೇ ಕಾರಣ. ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ ಎಂದು ಸಿಎಂ ಸಿದ್ಧರಾಮಯ್ಯ ಹರಿಹಾಯ್ದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ “ಆರೋಗ್ಯ ಆವಿಷ್ಕಾರ” ಯೋಜನೆಯಡಿ ₹440 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಲಾಯಿತು.ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, 5000 ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವೆಚ್ಚ ಮಾಡಬೇಕು. ಜನಹಿತದಲ್ಲಿ ಸೌಲಭ್ಯಗಳನ್ನು ಜಾರಿ ಮಾಡಿ ಕಾರ್ಯರೂಪಕ್ಕೆ ತರಬೇಕು. ಶಿಕ್ಷಣ ಕ್ಷೇತ್ರದಲ್ಲಿ ಯಾದಗಿರಿ ಹಿಂದುಳಿದಿದ್ದು, ಶಿಕ್ಷಕರ ಕೊರತೆಯನ್ನು ನೀಗಿಸಬೇಕು. ಖಾಲಿ ಹುದ್ಧೆಗಳನ್ನು ಭರ್ತಿ ಮಾಡಲು ಕಲ್ಯಾಣ ಕರ್ನಾಟಕದಲ್ಲಿ ಆರ್ಥಿಕ ತೊಂದರೆಯಿಲ್ಲ. ಬ್ಯಾಕಲಾಗ್ ಹುದ್ಧೆಗಳನ್ನು ತುಂಬಿ. ಸಿಂಗಾಪುರ ಮಾಡುವುದು ಬೇಡ. ಕಲ್ಯಾಣ ಕರ್ನಾಟಕವನ್ನು ಬೆಂಗಳೂರು ಮೈಸೂರುನಂತೆ ಅಭಿವೃದ್ಧಿಪಡಿಸಿ ಎಂದರು. ಬೈಟ್
ಇನ್ನು ಸಿಎಂ ಸಿದ್ಧರಾಮಯ್ಯನವರು, ನಂಜುಂಡಪ್ಪನವರ ವರದಿಯ ಪ್ರಕಾರ ಕಲ್ಯಾಣ ಕರ್ನಾಟಕ ಅತ್ಯಂತ ಹಿಂದುಳಿದಿದ್ದು, 371 ಜೆ ಅನ್ನು ಇಲ್ಲಿ ಜಾರಿಗೊಳಿಸಲಾಗಿದೆ. ಈ ತಿದ್ದುಪಡಿಗೆ ಮಾಜಿ ಸಿಎಂ ಧರಮ್ ಸಿಂಗ್ ಅವರೇ ಕಾರಣ ಎಂದು ನೆನಪಿಸಿಕೊಂಡರು. ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಯ ವೇಳೆ ನುಡಿದಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಮೂರು ವರ್ಷಗಳಲ್ಲಿ 13 ಸಾವಿರ ಕೋಟಿ ರೂಪಾಯಿಗಳನ್ನು ಕೆಕೆಆರಡಿಬಿಗೆ ರಾಜ್ಯ ಸರ್ಕಾರ ನೀಡಿದೆ. ಅಭಿವೃದ್ಧಿಗಾಗಿ 5000 ಸಾವಿರ ಕೋಟಿಯನ್ನು ಖರ್ಚು ಮಾಡಲೇಬೇಕು. ಖರ್ಚು ಮಾಡದಿದ್ದರೇ ಅಭಿವೃದ್ಧಿ ಕುಂಠಿತವಾಗುತ್ತದೆ. ಕರ್ನಾಟಕದಲ್ಲಿ ಎಲ್ಲರಿಗೂ ಮೂಲಭೂತ ಸೌಕರ್ಯಗಳು ದೊರೆತು ಸರ್ವತೋಮುಖ ಅಭಿವೃದ್ಧಿಯಾಗಬೇಕು. ಸ್ವಾತಂತ್ರ್ಯ ಹೋರಾಟಗಾರ ಕೊಲ್ಲೂರು ಮಲ್ಲಪ್ಪನವರ ಸ್ಮಾರಕ ನಿರ್ಮಾಣವಾಗಬೇಕು. ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು. ಬೈಟ್
ಇದೇ ವೇಳೆ ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.ಬೆಲೆ ಏರಿಕೆಗೆ ಪಿಎಂ ಮೋದಿ ಅವರೇ ಕಾರಣ. ಅಭಿವೃದ್ಧಿ ಮಾಡದೇ ಕೇವಲ ಲೂಟಿ ಹೊಡೆಯುವುದೇ ಬಿಜೆಪಿ ಕೆಲಸ ಎಂದು ಹರಿಹಾಯ್ದರು. ಬೈಟ್
ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಶರಣ ಬಸಪ್ಪ ದರ್ಶನಾಪೂರ, ಸಚಿವರಾದ ಎಚ್.ಸಿ. ಮಹಾದೇವಪ್ಪ, ದಿನೇಶ್ ಗುಂಡುರಾವ್, ಡಿ. ಸುಧಾಕರ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜೇಯ ಧರ್ಮಸಿಂಗ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು.