ಬೆಂಗಳೂರು

ಪ್ರೀತಿಸಿದ ಹುಡುಗಿ ಸಿಗದ ಕಾರಣ ನೊಂದ ಪ್ರೇಮಿ ಆತ್ಮಹತ್ಯೆಗೆ ಶರಣು.

ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ.

ಯುವತಿ ಸಹ ಸತೀಶ್​ನ ಲವ್ ಪ್ರಪೋಸ್​ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ಇಬ್ಬರ ಪ್ರೀತಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಮನನೊಂದು ಸತೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Related Articles

Leave a Reply

Your email address will not be published. Required fields are marked *

Back to top button