ಬೆಂಗಳೂರು
ಸಾರಿಗೆ ಬಸ್ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಬೀಳಲಿದೆ ಕತ್ತರಿ…!

ಸಾರಿಗೆ ಬಸ್ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನಾಲ್ಕು ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು ಬೆಲೆ ಏರಿಕೆಯಿಂದ ತತ್ತರಿಸಿರೋ ಜನರಿಗೆ ಇದೀಗ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆನೋ ಫ್ರೀ ಇದೆ.
ಒಂದು ಕೊಟ್ಟು ಮತ್ತೊಂದು ಕಸಿದುಕೊಂಡಿದ್ದಾರೆ ಎನ್ನುವುದು ಜನರ ಮಾತು. ಇದನ್ನೇ ಅಸ್ತ್ರ ಮಾಡ್ಕೊಂಡ ಬಿಜೆಪಿ, ಇವತ್ತು ಬೀದಿಗಿಳಿದು ಸರ್ಕಾರದ ವಿರುದ್ಧ ಹೋರಾಟ ಮಾಡಿದೆ. ಇನ್ನು ಈ ಬಗ್ಗೆ ಖುದ್ದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸುದ್ದಿಗೋಷ್ಠಿ ನಡೆಸಿ ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಮಜಾಯಿಷಿ ನೀಡಿದರು.