Uncategorized
“ವಸೂಲಿಗೆಂದೇ ಪಿಎಗಳನ್ನು ಇಟ್ಟುಕೊಂಡಿದ್ದಾರೆ!’ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ”ಹೊಸ ಬಾಂಬ್!

ಚಿಕ್ಕಮಗಳೂರು: ಸಿಟಿ ರವಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ಇನ್ನು ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಲೇ ಇದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು, ಬೆಂಬಲಿಗರು ಸಿಟಿ ರವಿಯನ್ನು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿ ಸಿಟಿ ರವಿ ಮೇಲೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧದಲ್ಲಿ ಹಲ್ಲೆಯನ್ನೂ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್ ವಸೂಲಿಗೆಂದೇ ಪಿಎ ಗಳನ್ನ ಇಟ್ಕೊಂಡಿದ್ದಾರೆ. ಇವರ ಕಾಟ ತಡೆಯದೇ ಎಸ್ ಡಿ ಎ ಒಬ್ಬ ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದ ಎಂದು ಆರೋಪಿಸಿದ್ದಾರೆ.