Uncategorizedರಾಜಕೀಯರಾಜ್ಯ
(ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಏಕಾಏಕಿ ರಾಜೀನಾಮೆ ನೀಡಿದ್ದಾರೆ.
ರಮೇಶ ಕತ್ತಿ ಏಕಾಏಕಿ ರಾಜೀನಾಮೆ ನೀಡಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಏಕಾಏಕಿ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಬ್ಯಾಂಕ್ ವ್ಯವಸ್ಥಾಪಕರಿಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
41 ವರ್ಷಗಳಿಂದ ರಮೇಶ ಕತ್ತಿ ನಿರ್ದೇಶಕರಾಗಿ, ಆರನೇ ಬಾರಿ ಅಧ್ಯಕ್ಷರಾಗಿದ್ದರು.
ನಿರ್ದೇಶಕ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ರಮೇಶ ಅವರ ಮಧ್ಯೆ ಮುಸುಕಿನ ಗುದ್ದಾಟ ನಡೆದೇ ಇತ್ತು. ಗುರುವಾರ ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಇದು ಸ್ಫೋಟಗೊಂಡಿತು. ಅಧ್ಯಕ್ಷರನ್ನು ಹೊರಗಿಟ್ಟೇ ಎಲ್ಲ ನಿರ್ದೇಶಕರೂ ಪ್ರತ್ಯೇಕ ಸಭೆ ನಡೆಸಿದ್ದರು. ರಮೇಶ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಗಳ ಮಧ್ಯೆಯೇ ರಮೇಶ ರಾಜೀನಾಮೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.