ಶಿವಮೊಗ್ಗ
ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ.

ಶಿವಮೊಗ್ಗ: ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಶಿವಮೊಗ್ಗದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಶ್ರಮಿಕ ವರ್ಗಕ್ಕೆ ಸಂಬಂಧಿಸಿದ ಹಲವಾರು ವಿಚಾರಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಯಿತು. ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳ ತ್ವರಿತ ಮುಕ್ತಾಯಕ್ಕೆ ಕ್ರಮಕೈಗೊಳ್ಳಬೇಕೆಂದು ಸಚಿವರಾದ ಶ್ರೀ ಸಂತೋಷ್ ಲಾಡ್ ಆಗ್ರಹಿಸಿದರು
ಈ ಸಂದರ್ಭದಲ್ಲಿ ಶಾಸಕರುಗಳಾದ ಶ್ರೀ ಚನ್ನಬಸಪ್ಪ ಅವರು, ಶ್ರೀ ಧನಂಜಯ ಸರ್ಜಿ ಅವರು, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿ ವೃಂದದವರು ಇನ್ನು ಹಲವರು ಉಪಸ್ಥಿತರಿದ್ದರು.