ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ಗೆ ಹೈಕಮಾಂಡ್ ಸೂಚನೆ; ಸಚಿವ ಡಾ. ಜಿ ಪರಮೇಶ್ವರ್

ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ. ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ. ಸಭೆ ನಡೆಸುತ್ತೇವೆ ಎಂದಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಸ್.ಸಿ/ಎಸ್.ಟಿ ಸಮುದಾಯದ ಸಮಸ್ಯೆಗಳನ್ನು ಚರ್ಚೆ ಮಾಡಬೇಕು ಎಂಬ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿತ್ತು. ಆದರೇ ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪಸಿಂಗ ಸುರ್ಜೆವಾಲಾ ಅವರು ತಾವು ಕೂಡ ಭಾಗವಹಿಸಬೇಕೆಂದು ಆಹ್ವಾನಿಸಲಾಗಿದೆ. ಆದರೇ ಅವರಿಗೆ ಸಮಯವಿಲ್ಲದ ಕಾರಣ ಮುಂದಕ್ಕೆ ಹಾಕಲು ಹೇಳಿದ್ದು, ಅದನ್ನು ರದ್ಧುಗೊಳಿಸಿಲ್ಲ. ಮುಂದೂಡಲಾಗಿದೆ ಎಂದರು.
ಇನ್ನು ನಕ್ಸಲರು ಶರಣಾಗತಿಗೆ ಬಿಜೆಪಿಗರಿಂದ ವಿರೋಧ ವ್ಯಕ್ತವಾಗಿರುವುದಕ್ಕೆ ಪ್ರತಿಕ್ರಿಯಿಸಿದ ಅವರು ನಕ್ಸಲರ ಮೇಲೆ ಹಲವಾರು ಪ್ರಕರಣಗಳಿರುವುದು ನಿಜ. ಆದರೇ ಅವರನ್ನು ಕಾಡಿನಲ್ಲಿದ್ದುಕೊಂಡು ಜೀವನ ನಡೆಸುವ ಬದಲೂ ಸಮಾಜದ ಮುಖ್ಯವಾಹಿನಿಗೆ ಬರಲು ಹಿರಿಯ ಅಧಿಕಾರಿಗಳು ಕರೆ ನೀಡಿದ್ದಾರೆ.
ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.ಅವರ ಮೇಲಿರುವ ಕೇಸಗಳ ಕುರಿತು ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಚಿಂತಿಸಲಾಗುವುದು ಎಂದರು.