ಬೆಂಗಳೂರು

ಹಸುಗಳ ಕೆಚ್ಚಲು ಕತ್ತರಿಸಿ ವಿಕೃತ; ಪಾಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಬೆಂಗಳೂರಿನಲ್ಲಿ ಶನಿವಾರ ರಾತ್ರಿ ವಿಕೃತ  ಮೆರೆದ ಘಟನೆ ನಡೆದಿತ್ತು. ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದ ಪಾಪಿಗಳನ್ನು ಕೇವಲ 48 ಗಂಟೆಗಳಲ್ಲಿ ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ . ಇದರಲ್ಲಿ ಬೇರೆ ಯಾರದ್ದು ಪಾತ್ರ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ  ಬಿಜೆಪಿ ನಾಯಕರು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಪ್ರಕರಣ ದಾಖಲಿಸಿಕೊಂಡ ನಂತರ ಪೊಲೀಸರು ಆರೋಪಿ ಬಿಹಾರ ಮೂಲಕ 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿ ಹೆಸರು ಶೇಖ್ ನಸ್ರು. ಈತ ಕುಡಿದ ಅಮಲಿನಲ್ಲಿ ಈ ರೀತಿ ಕೃತ್ಯ ಎಸಗಿದ್ದಾರೆ. ಮತ್ತಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ್ದಾನೆ. ಅವುಗಳಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆರ್.ಅಶೋಕ್ ಇತರ ನಾಯಕರು, ಹಿಂದೂಪರ ಕಾರ್ಯಕರ್ತರು ಆಗಮಿಸಿ ಭೇಟಿ ನೀಡಿದ್ದರು.

 

Related Articles

Leave a Reply

Your email address will not be published. Required fields are marked *

Back to top button