ಬೆಳಗಾವಿ ಎಲ್ಲಾ ಅಂಗನವಾಡಿ ಹಾಗೂ ಸರ್ಕಾರಿ ಶಾಲೆಗಳಿಗೆ ರಜೆ ; ಮೊಹಮ್ಮದ್ ರೋಷನ್

ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಅನಾವರಣಗೊಳಿಸಲಾಗುತ್ತಿದೆ.
ಈ ಹಿನ್ನಲೆ ಬಿಳಗಾವಿ ನಗರ, ಬೆಳಗಾವಿ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾ್ಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಎದುರಿನಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಅನಾವರಣಗೊಳಿಸಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಕಾರ್ಯಕ್ರಮದ ಮೂಖ್ಯ ಉಪಸ್ಥಿತಿ ವಹಿಸುವರು. ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್,
ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಪಾಲ್ಗೊಳ್ಳುವರು.
ಗಾಂಧೀಜಿಯವರ ಪ್ರತಿಮೆಯು ಒಟ್ಟು 4.83 ಕೋಟಿ ರೂಪಾಯಿ ವೆಚ್ಚದಲ್ಲಿ ಪಂಚಲೋಹದಿಂದ ನಿರ್ಮಾಣಗೊಂಡಿರುತ್ತದೆ. ಮೈಸೂರಿನ ಕಲಾವಿದರಾದ ಅರುಣ ಯೋಗಿರಾಜ ಅವರು ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ನಿರ್ಮಿಸಿರುತ್ತಾರೆ.