ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 13 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ :ಸತೀಶ ಜಾರಕಿಹೊಳಿ

ಬೆಳಗಾವಿ: ರಾಜ್ಯ ಸರ್ಕಾರ ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನದ ಕುರಿತು ಆಸಕ್ತಿ ಹಾಗೂ ಹೆಚ್ಚಿನ ಜ್ಞಾನ ಒದಗಿಸುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಹಿಡಕಲ್ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ತಿಳಿಸಿದರು.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಮಾತನಾಡಿ ವಿಜ್ಞಾನ ಕೇಂದ್ರದ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ಈಗಾಗಲೇ 13 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ತಾರಾಲಯ ಉಪಯೋಗವಾಗಲಿದೆ ಎಂದರು.
ಜಿಲ್ಲೆಯಲ್ಲಿ ಪ್ರವಾಸೊದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸಿ ಸರ್ಕಿಟ್ ನಿರ್ಮಿಸಲು ಗೋಕಾಕ ಫಾಲ್ಸ್, ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯ ಹಾಗೂ ಹಿಡಕಲ್ ಡ್ಯಾಂ ಯೋಜನೆಯೊಂದಿಗೆ ಪ್ರವಾಸಿ ಸರ್ಕಿಟ್ ನಿರ್ಮಿಸುವ ಯೋಜನೆ ಸರಕಾರದ್ದಾಗಿದೆ.
ಹಿಡಕಲ್ ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆಗಳಿಗೂ ಪ್ರಾಶಸ್ತ್ಯವಾಗಿದ್ದು ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು.ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯ ವಿವಿಧೆಡೆ ಬಹಳಷ್ಟು ಅಭಿವೃಧ್ದಿ ಕಾಮಗಾರಿಗಳನ್ನು ಕೈಗೆತ್ತಿಗೊಳಗಿದೆ. ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.