ಬೆಳಗಾವಿ
ಹುತಾತ್ಮ ವೀರಯೋಧರಿಗೆ ಅಂತಿಮ ಗೌರವ ನಮನ ಸಲ್ಲಿಸಿದ ಸಿ.ಎಂ.

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮ ಯೋಧರುಗಳಾದ ಸುಬೇದಾರ್ ದಯಾನಂದ ತಿರಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮಾನ್ಯ ಮಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಸೇರಿ ಅಂತಿಮ ಗೌರವ ಸಲ್ಲಿಸಿದೆ.
ನಮ್ಮ ಯೋಧರ ಜೀವನ, ವೃತ್ತಿ ಶ್ರೇಷ್ಠವಾದದ್ದು, ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತೀವ ನೋವು ತಂದಿದೆ. ಈ ಸಂದರ್ಭದಲ್ಲಿ ನಾಲ್ಕು ಜನ ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಸಹ ಪಾಲ್ಗೊಂಡಿರುತ್ತೇನೆ.
ಸರಕಾರದ ನಿಯಮಾನುಸಾರ ಹುತಾತ್ಮರ ಕುಟುಂಬಗಳಿಗೆ ಸಲ್ಲಬೇಕಾದ ಸಹಾಯವನ್ನು ರಾಜ್ಯ ಸರ್ಕಾರ ಒದಗಿಸಲು ಬದ್ದವಾಗಿದೆ.