Uncategorized

ಸಿ ಟಿ ರವಿ ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ ಟಿ ರವಿ ಅವರ ಬಂಧನ ಏಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿ ಟಿ ರವಿ ಬಂಧನ ಖಂಡಿಸಿ ಇಂದು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.

ಸಿ ಟಿ ರವಿ ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾಗಿ ಆಡಿಯೋ ಮತ್ತು ವಿಡಿಯೋ ಇದೆ ಅಂತಲೂ ಹೇಳಿದ್ದಾರೆ.

ಆದರೆ, ನಾನು ಅದನ್ನು ಈವರೆಗೂ ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ ಟಿ ರವಿ ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

Related Articles

Leave a Reply

Your email address will not be published. Required fields are marked *

Back to top button