ಕಲ್ಲಿನ ಹೃದಯದವರಿಗೆ ಉತ್ತರ ಕೊಡಲು ಹೋಗಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ ಅಪಘಾತದ ಬಗ್ಗೆ ರಾಜಕೀಯ ಮಾಡುವ ವ್ಯಕ್ತಿಗಳು ಕಲ್ಲಿನ ಹೃದಯದವರು. ಅವರ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸಾವು, ಬದುಕಿನ ಹೋರಾಟದಲ್ಲಿ ನಾನು ಗೆದ್ದು ಬಂದಿದ್ದೇನೆ. ವಿಪಕ್ಷದವರು ನನ್ನ ಅಪಘಾತದಲ್ಲಿ ಹಣ ಸಾಗಾಟ ಮಾಡುತ್ತಿದ್ದರು ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರು ಅಪಘಾತದ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಲ್ಲ. ರಾಜ್ಯದ ಜನರ ಸೇವೆ ಮಾಡುವುದು ಒಂದೇ ನನ್ನ ಗುರಿ ಎಂದರು.
ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ. ಮಾರ್ಚ್ ನಲ್ಲಿ ರಾಜ್ಯ ಬಜೆಟ್ ಇದೆ. ವೈದ್ಯರು ನನಗೆ ವಿಶ್ರಾಂತಿ ಪಡೆದುಕೊಳ್ಳಲು ಹೇಳಿದ್ದಾರೆ. ಮೊದಲು ರಾಜ್ಯದ ಅಭಿವೃದ್ಧಿ ಮುಖ್ಯ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೆಲಸಗಳು ಸಾಕಷ್ಟು ಇವೆ. ಅದರ ಕಡೆ ಗಮನ ಹರಿಸುವೆ ಎಂದರು.