ಮೈಸೂರ್
ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ; ಪ್ರಲ್ಹಾದ ಜೋಷಿ

ಮುಡಾ ಹಗರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮಗಳೊಂದಿತೆ ಮಾತನಾಡಿದ ಅವರು, ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಹೈಕೋರ್ಟಗೆ ಹೋದರು. ರಾಜ್ಯಪಾಲರ ನಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಾಡಿದ ಟಿಪ್ಪಣಿಯನ್ನು ಯಾರೂ ತೆಗೆದು ಹಾಕಲಿಲ್ಲ.
ಹೈಕೋರ್ಟ್ ಸಿಎಂ ಆ ಕೇಸನಲ್ಲಿ ನಿಯಮ ಉಲ್ಲಂಘಿಸಿದ್ದಾರೆಂದು ಹೇಳಿದೆ. ಹೀಗಿರುವಾಗ ಸಿದ್ಧರಾಮಯ್ಯ ಸಿಎಂ ಸ್ಥಾನದಲ್ಲಿರುವುದು ಅನೈತಿಕತೆ ಎಂದರು. ಮುಡಾ ಹಗರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಭ್ರಷ್ಟಾಚಾರ ಮತ್ತು ಕುರ್ಚಿ ಜಗಳದಲ್ಲಿ ತೊಡಗಿರುವುದರಿಂದ ಇಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು.