ಬೆಂಗಳೂರು
ಮೈಕ್ರೋಫೈನಾನ್ಸ್ ಸಂಸ್ಥೆಗಳ ವಿರುದ್ದ ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ; ಡಾ. ಜಿ.ಪರಮೇಶ್ವರ್

ಬೆಂಗಳೂರು: “ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ ಸಚಿವರೊಂದಿಗೆ ಸಭೆ ಕರೆಯಲಾಗಿದೆ. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸಲಾಗುತ್ತಿದೆ. ಸಹಾಯವಾಣಿ ಆರಂಭಿಸಲಾಗುವುದು. ಸಭೆಯಲ್ಲಿ ಅಂತಿಮವಾದರೆ ನಾಳೆ ಕ್ಯಾಬಿನೆಟ್ ಮುಂದೆ ತರುತ್ತೇವೆ” ಎಂದು ತಿಳಿಸಿದರು.