ಸವದತ್ತಿ

ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ; ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ.

ಉಗರಗೋಳ: ‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ.

ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಯಲ್ಲಮ್ಮ ದೇವಸ್ಥಾನವನ್ನು ಎರಡ್ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆ. ದೇವಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಅದು ಶುದ್ಧಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ.

ಯಲ್ಲಮ್ಮ ದೇವಸ್ಥಾನದಲ್ಲಿ ಎಂದಿನಂತೆ, ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೂ ದರ್ಶನಕ್ಕೆ ಅವಕಾಶವಿದೆ. ಹಾಗಾಗಿ ಭಕ್ತರು ವದಂತಿಗೆ ಕಿವಿಗೊಡದೆ ಗುಡ್ಡಕ್ಕೆ ಭೇಟಿ ಕೊಟ್ಟು, ಅಮ್ಮನ ದರ್ಶನ ಪಡೆಯಬೇಕು ಎಂದು ತಿಳಿಸಿದ್ದಾರೆ

ಜನವರಿಯಲ್ಲಿ ಬನದ ಹುಣ್ಣಿಮೆ ಜಾತ್ರೆ ಯಶಸ್ವಿಯಾಗಿ ನಡೆಯಿತು. ಈಗ ಫೆಬ್ರುವರಿಯಲ್ಲಿ ಭರತ ಹುಣ್ಣಿಮೆ ಜಾತ್ರೆ ಸುಗಮವಾಗಿ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದ್ದು, ಅವರಿಗೆ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

ದೇವಸ್ಥಾನ ಬಂದ್ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಬಂದಾಗ, ಯಾರೂ ಅವುಗಳನ್ನು ಶೇರ್ ಮಾಡದೆ ಸಹಕರಿಸಬೇಕು ಎಂದೂ ಮನವಿ

Related Articles

Leave a Reply

Your email address will not be published. Required fields are marked *

Back to top button