ಬೆಂಗಳೂರು

ನಾವು ವಿರೋಧ ಪಕ್ಷಕ್ಕೆ ಪ್ರಜಾಪ್ರಭುತ್ವದಲ್ಲಿ ವಾಚಡಾಗ್ ಸ್ಥಾನ ನೀಡಿದ್ದೇವೆ; ಜಿ. ಪರಮೇಶ್ವರ

ಬೆಂಗಳೂರು: ಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡ ಗೃಹ ಸಚಿವ ಜಿ. ಪರಮೇಶ್ವರ ಅವರು ನಮ್ಮ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ವಾಚಡಾಗ್ ಸ್ಥಾನವನ್ನು ನೀಡಿದ್ದೇವೆ. ನಮ್ಮ ತಪ್ಪುಗಳಿಗೆ ಸಕಾರಾತ್ಮಕ ಸಲಹೆಗಳನ್ನು ನೀಡಿದರೇ ಅವುಗಳನ್ನು ಸ್ವೀಕರಿಸುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡರು. ಬಿಜೆಪಿಯಲ್ಲಿ ಅಸಮಾಧಾನಗೊಂಡ ಶಾಸಕರನ್ನು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಅಥವಾ ಬೇಡ ಎಂಬುದು ಅಧ್ಯಕ್ಷರಿಗೆ ಬಿಟ್ಟ ವಿಚಾರ. ಬಿಜೆಪಿಗರ ಆಂತರೀಕ ವಿಚಾರವನ್ನು ತಾವು ಮಾತನಾಡುವುದಿಲ್ಲ ಎಂದರು. 

ಬಿಜೆಪಿ ಒಳಜಗಳದ ಹಿನ್ನೆಲೆ ಕಾಂಗ್ರೆಸಗೆ ಪ್ರಬಲ ವಿರೋಧ ಪಕ್ಷ ಇಲ್ಲದಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಇದನ್ನು ಜನಸಮುದಾಯ ಗಮನಿಸಲಿದೆ. ಕಾನೂನಾತ್ಮಕವಾಗಿ ಮತ್ತು ಪ್ರಜಾಪ್ರಭುತ್ವದ ದಾರಿಯಲ್ಲಿ ನಾವು ವಿರೋಧ ಪಕ್ಷವನ್ನು ನಮ್ಮ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ವಾಚಡಾಗ್ ಸ್ಥಾನವನ್ನು ನೀಡಿದ್ದೇವೆ. ನಮ್ಮ ತಪ್ಪುಗಳಿಗೆ ಸಕಾರಾತ್ಮಕ ಸಲಹೆಗಳನ್ನು ನೀಡಿದರೇ ಅವುಗಳನ್ನು ಸ್ವೀಕರಿಸುತ್ತೇವೆ. ಎಂದರು.

Related Articles

Leave a Reply

Your email address will not be published. Required fields are marked *

Back to top button