ರಾಜಕೀಯರಾಜ್ಯ

ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ

ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ

ಹೊಸಪೇಟೆ (ವಿಜಯನಗರ): ಕಬ್ಬು ಬೆಳೆಗಾರರಿಗೆ ಶೇ 9.50 ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ತೂಕದಲ್ಲಿ ಆಗುತ್ತಿರುವ ಮೋಸ ತಡೆಗಟ್ಟಬೇಕು ಮೊದಲಾದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋ ನಡೆಸಲು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ.

 

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್‌.ಎನ್.ಭರತ್‌ರಾಜ್‌ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹500 ಎಸ್‌ಎಪಿ ನಿಗದಿಪಡಿಸಬೇಕು, ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿ ಮಾಡಬೇಕು, ಸಕ್ಕರೆ ಇಳುವರಿ ಪ್ರಕಟಣೆಯಲ್ಲಿ ಮತ್ತು ತೂಕದಲ್ಲಿ ಆಗುವ ಮೋಸ ತಡೆಯಲು ಪ್ರತಿ ಕಾರ್ಖಾನೆ ವ್ಯಾಪ್ತಿಗೆ ಸಮಿತಿ ರಚಿಸಿ, ಆ ಸಮಿತಿಗೆ ಐದು ಮಂದಿ ಕಬ್ಬು ಬೆಳೆಗಾರರನ್ನು ನೇಮಿಸಬೇಕು ಎಂಬ ಬೇಡಿಕೆಯೂ ಇದೆ ಎಂದರು.

‘ಕೃಷಿ ಬೆಲೆ ಆಯೋಗದ ಪ್ರಕಾರ ಒಂದು ಟನ್ ಕಬ್ಬು ಬೆಳೆಯಲು ₹3,580 ಖರ್ಚು ಬರುತ್ತದೆ, ಕೃಷಿ ತಜ್ಞರಾದ ಡಾ. ಸ್ವಾಮಿನಾಥನ್ ಆಯೋಗದ ವರದಿ ಪ್ರಕಾರ ಉತ್ಪಾದನಾ ವೆಚ್ಚದ ಜೊತೆಗೆ ಶೇ 50ರಷ್ಟು ಲಾಭಾಂಶ ಸೇರಿಸಿದರೆ ಒಂದು ಟನ್ ಕಬ್ಬಿಗೆ ₹5,370 ಆಗುತ್ತದೆ. ಹೀಗಾಗಿ ಟನ್‌ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ 76 ಸಕ್ಕರೆ ಕಾರ್ಖಾನೆಗಳು ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ನೋಡಿಕೊಳ್ಳಬೇಕು’ ಎಂದು ಭರತ್‌ರಾಜ್ ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button