ಬೆಳಗಾವಿ
ವಿಡಿಯೋ ಸಂವಾದದ ಮೂಲಕ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ 2025-2026 ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಸಚಿವರು ಪ್ರಸ್ತಾಪಿಸಿದರು. ವಿಡಿಯೋ ಸಂವಾದಲ್ಲಿ ಇಲಾಖೆಯ ಹಾಗೂ ರಾಜ್ಯ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.