
ಬೈಲಹೊಂಗಲ: ಸಮೀಪದ ಹಲಕಿ ಗ್ರಾಮದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.
ಸವದತ್ತಿ ತಾಲೂಕಿನ ಹಲಕಿ ಗ್ರಾಮದ ಬಾಲನಾಯ್ಕ ಮರಿನಾಯ್ಕ ನಾಯ್ಕರ (65), ಬೈಲಹೊಂಗಲ ತಾಲೂಕಿನ ಮೇಕಲಮರಡಿ ಗ್ರಾಮದ ಶಾನೂರ್ ಹುಸೇನಸಾಬ್ ಶಾಬಾಯಿ (28) ಮೃತಪಟ್ಟವರು.
ಬಾಲನಾಯ್ಕ ಅವರು ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುವಾಗ ಮಳೆ ಬಂದಿದ್ದರಿಂದ ಹುಣಸೆ ಮರದ ಕೆಳಗೆ ನಿಂತಿದ್ದರು. ಮದುವೆ ಕಾರ್ಯಕ್ರಮ ಮುಗಿಸಿ ಮೇಕಲಮರ್ಡಿ ಗ್ರಾಮಕ್ಕೆ ತೆರಳುತ್ತಿದ್ದ ಶಾನೂರ್ ಕೂಡ ಮಳೆಯಿಂದ ರಕ್ಷಣೆ ಪಡೆಯಲು ಅದೇ ಮರದ ಕೆಳಗೆ ನಿಂತಾಗ ಸಿಡಿಲು ಬಡಿದಿದೆ.
ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.