ಬೆಳಗಾವಿ

“ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025” ರ ಕುರಿತು ಪೂರ್ವಭಾವಿ ಸಭೆ.

ಬೆಳಗಾವಿ :“ವೀರರಾಣಿ ಬೆಳವಡಿ ಮಲ್ಲಮ್ಮನ ಉತ್ಸವ-2025” ರ ಕುರಿತು ಮಾನ್ಯ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ ರವರ ಘನ ಉಪಸ್ಥಿತಿಯಲ್ಲಿ ಇಂದು ಅಪರಾಹ್ನ ಬೆಳಗಾವಿ ಜಿಲ್ಲೆಯ ಬೆಳವಡಿಯಲ್ಲಿರುವ ರಾಣಿ ಮಲ್ಲಮ್ಮ ಸ್ಮಾರಕ ಭವನದಲ್ಲಿ ಬೆಳವಡಿ ಮಲ್ಲಮ್ಮನ ಉತ್ಸವ ಆಚರಣೆ ನಿಮಿತ್ತ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿ ಶ್ರೀ ಮೊಹಮ್ಮದ ರೋಷನ್ ರವರ ಅಧ್ಯಕ್ಷತೆಯಲ್ಲಿ ಜರುಗಿಸಲಾಯಿತು.

. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಭೀಮಾಶಂಕರ ಗುಳೇದ, ಬೆಳಗಾವಿ ಜಿಲ್ಲಾ ಪಂಚಾಯತ ಸಿ.ಇ.ಒ. ಶ್ರೀ ರಾಹುಲ್ ಶಿಂಧೆ, ಬೈಲಹೊಂಗಲ ಉಪವಿಭಾಗದ ಎ.ಸಿ., ಶ್ರೀಮತಿ ಪ್ರಭಾವತಿ ಫಕೀರಪೂರ, ಬೈಲಹೊಂಗಲ ತಹಶೀಲ್ದಾರ ಹಾಗೂ ಇತರೆ ಇಲಾಖಾ ಅಧಿಕಾರಿಗಳು ಹಾಜರಿದ್ದರು. ಉತ್ಸವನ್ನು ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ಎಲ್ಲಾ ಅಗತ್ಯ ಏರ್ಪಾಟುಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

Related Articles

Leave a Reply

Your email address will not be published. Required fields are marked *

Back to top button