ಹಿಲ್ ಗಾರ್ಡನ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಸತೀಶ್ ಜಾರಕಿಹೊಳಿ.

ಗೋಕಾಕ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಅವರು ಮಾತನಾಡಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತದ ಹಿರಿಯ ಮುತ್ಸದ್ದಿಯನ್ನು ಕಳೆದುಕೊಂಡಿದೆ. ಮೃದು ಸ್ವಭಾವದ ಅರ್ಥಿಕ ತಜ್ಞರಾಗಿದ್ದ ಸಿಂಗ್ ಅವರ ನಿಧನದಿಂದ ನಮ್ಮ ದೇಶಕ್ಕೆ ಅಪಾರ ಹಾನಿಯಾಗಿದೆ.
ಸುಮಾರು ೧೦ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ದೇಶಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ನಮ್ಮ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನಕ್ಕೆ ಅವರು ಭಾಜನರಾಗಿದ್ದರು ಎಂದು ಡಾ. ಸಿಂಗ್ ಅವರ ಕೊಡುಗೆಗಳನ್ನು ಅವರು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ವಿ ಆರ್ ಪರಸನ್ನವರ , ಪಾಂಡು ಮನ್ನಿಕೇರಿ,ವಿನೋದ್ ಡೊಂಗರೆ, ಮುಖಂಡರಾದ ಕಲ್ಲಪ್ಪಾ ಗೌಡ ಲಕ್ಕಾರ, ಕಳಸನ್ನರ, ಮಾನಿಂಗ ಸಾಯನ್ನವರ, ಪ್ರವೀಣ್ ಗುಡ್ಡಾಕಾಯ ಹಾಗೂ ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಸುರೇಶ್ ಮುದ್ದಪ್ಪಗೋಳ, ಮಂಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.