ನವದೆಹಲಿ

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆಯಿತು ಕಾಲ್ತುಳಿತ 18 ಮಂದಿಯ ಸಾವು.

ನವದೆಹಲಿ: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವರೆಗೆ 18 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಗ್‌ರಾಜ್‌ಗೆ ತೆರಳುವ ರೈಲು ತಡವಾಗಿ ಬಂದಿದ್ದರಿಂದ  ಏಕಾಏಕಿ ಜನರು ರೈಲು ಹತ್ತಲು ಹೋಗಿ ಆಗ ಉಂಟಾದ ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಸಂಭವಿಸಿದೆ. ಫ್ಲಾಟ್‌ಫಾರ್ಮ್‌ ನಂಬರ್‌ 14 ಮತ್ತು 15ರಲ್ಲಿ ಈ ದುರಂತ ಸಂಭವಿಸಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button