ನವದೆಹಲಿ

 ‘ಸತ್ಯ ಮರೆಮಾಚಲು ಮೋದಿ ಸರ್ಕಾರ ಯತ್ನ ; ದೆಹಲಿ ಕಾಲ್ತುಳಿತಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ; ಖರ್ಗೆ

ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಆಘಾತ ತಂದ ಘಟನೆಯಾಗಿದೆ ಎಂದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ  ಎಂದು ಕಿಡಿಕಾರಿದ್ದಾರೆ. ದೆಹಲಿ ಕಾಲ್ತುಳಿತ ಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ಎಂದು ಗರಂ ಆದ್ರು.

ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ “ಅತ್ಯಂತ ದುಃಖಕರ” ಮತ್ತು “ಹೃದಯ ವಿದ್ರಾವಕ” ಘಟನೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ ಸತ್ಯವನ್ನು ಮರೆಮಾಡಲು ನರೇಂದ್ರ ಮೋದಿ ಸರ್ಕಾರ ಮಾಡಿದ ಪ್ರಯತ್ನ ಅತ್ಯಂತ ನಾಚಿಕೆಗೇಡಿನ ಮತ್ತು ಖಂಡನೀಯ. ಸತ್ತವರು ಮತ್ತು ಗಾಯಗೊಂಡವರ ಸಂಖ್ಯೆಯನ್ನು ಆದಷ್ಟು ಬೇಗ ಘೋಷಿಸಬೇಕು ಮತ್ತು ಕಾಣೆಯಾದವರ ಗುರುತನ್ನು ಸಹ ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅಂತೆಯೇ ಸಂತ್ರಸ್ಥರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪ ಸೂಚಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button