ಬೆಂಗಳೂರು

ಫಾಸ್ಟ್​ಟ್ಯಾಗ್ ಹೊಸ ರೂಲ್ಸ್; ದುಪ್ಪಟ್ಟು ಹಣ ಪಾವತಿ..! ಏನಿದು ಹೊಸ ನಿಯಮ..?

ಫಾಸ್ಟ್‌ಟ್ಯಾಗ್‌ನ ಹೊಸ ನಿಯಮಾವಳಿಗಳು  ಇಂದಿನಿಂದ ಫೆ. 17 ಜಾರಿಗೆ ಬಂದಿವೆ. ಇದರ ಅಡಿಯಲ್ಲಿ, ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್‌ಟ್ಯಾಗ್ ಅನ್ನು ಕಪ್ಪುಪಟ್ಟಿಗೆ  ಸೇರಿಸಿದರೆ ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.

ಸರ್ಕಾರ ಹೊರಡಿಸಿರುವ ಹೊಸ ನಿಯಮಗಳ ಪ್ರಕಾರ, ವಾಹನವು ಟೋಲ್ ದಾಟುವ ಮೊದಲು 60 ನಿಮಿಷಗಳಿಗಿಂತ ಹೆಚ್ಚು ಕಾಲ ಮತ್ತು ಟೋಲ್ ದಾಟಿದ ನಂತರ 10 ನಿಮಿಷಗಳ ಕಾಲ ಫಾಸ್ಟ್‌ಟ್ಯಾಗ್ ನಿಷ್ಕ್ರಿಯವಾಗಿದ್ದರೆ, ವಹಿವಾಟನ್ನು ತಿರಸ್ಕರಿಸಲಾಗುತ್ತದೆ. ಇದು ದೋಷ ಕೋಡ್ 176 ಅಡಿಯಲ್ಲಿ ಬರಲಿದೆ.

ಏನಿದು ಹೊಸ ನಿಯಮ..?   

ಟೋಲ್ ದಾಟುವ 60 ನಿಮಿಷ ಮೊದಲು ಹಾಗೂ ದಾಟಿದ 10 ನಿಮಿಷಗಳ ಕಾಲ ಫಾಸ್ಟ್​ಟ್ಯಾಗ್ ಆಕ್ಟೀವ್ ಇರಬೇಕು. ಒಂದು ವೇಳೆ ಈ ನಿಯಮ ಪಾಲನೆ ಮಾಡದಿದ್ದರೆ, ಟೋಲ್ ಸಿಸ್ಟಮ್​​ನಲ್ಲಿ ಎರರ್ ಕೋಡ್ 176 ಎಂದು ತೋರಿಸಲಾಗುತ್ತದೆ. ಈ ವೇಳೆ ಪ್ರಯಾಣಿಕರು ದುಪ್ಪಟ್ಟು ಹಣ ಪಾವತಿ ಮಾಡಬೇಕಾಗುತ್ತದೆ.

ಕೆವೈಸಿ ಮಾಡಿಲ್ಲ ಎಂದಾದರೆ ನಿಮ್ಮ ಫಾಸ್ಟ್​ಟ್ಯಾಗ್ ಅನ್ನು ಕಪ್ಟುಪಟ್ಟಿಗೆ ಸೇರಿಸಲಾಗುತ್ತದೆ. ಅಂತಹ ಟ್ಯಾಗ್​ನೊಂದಿಗೆ ಬರುವ ವಾಹನಕ್ಕೆ ದುಪ್ಪಟ್ಟು ಸುಂಕ ವಿಧಿಸಲಾಗುತ್ತದೆ.ಒಂದು ವೇಳೆ ವಾಹನ ಟೋಲ್ ಗೇಟ್ ದಾಟಿದ 15 ನಿಮಿಷಗಳ ನಂತರ ಫಾಸ್ಟ್​ಟ್ಯಾಗ್ ಖಾತೆಯಿಂದ ಹಣ ಕಡಿತವಾದರೆ ಅದಕ್ಕೆ ವಾಹನ ಸವಾರರು ಹೆಚ್ಚಿನ ಶುಲ್ಕವನ್ನು ವಿಧಿಸಬೇಕಾಗುತ್ತದೆ.

ಟೋಲ್​ಗೇಟ್​ನಲ್ಲಿ ಹಣ ಕಡಿತ ವಿಳಂಬವಾದರೆ ಅದಕ್ಕೆ ಟೋಲ್ ಆಪರೇಟರ್ ಅನ್ನೇ ಹೊಣೆಯನ್ನಾಗಿ ಮಾಡಲಾಗುತ್ತದೆ. ತಪ್ಪು ಶುಲ್ಕ ಮತ್ತು ಹೆಚ್ಚುವರಿ ಹಣ ಕಡಿತಕ್ಕೆ ಸಂಬಂಧಿಸಿ ಬಳಕೆದಾರರು 15 ದಿನಗಳ ಬಳಿಕವಷ್ಟೇ ದೂರು ಸಲ್ಲಿಸಬಹುದು.

Related Articles

Leave a Reply

Your email address will not be published. Required fields are marked *

Back to top button