ಬೆಳಗಾವಿ

ಯಾವುದೇ ಗೊಂದಲಗಳಿಲ್ಲದೆ ಪಿಯು ಪರೀಕ್ಷೆ ನಡೆಸಿ ;ಮಹತ್ವದ ಸಭೆ

ಬೆಳಗಾವಿ:  ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷಾ ಸಿದ್ಧತೆಗಳ ಕುರಿತು ಮಹತ್ವದ ಸಭೆ ಇಂದು ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆಯಿತು

ಸಭೆಯಲ್ಲಿ ಪಿಯು ಉಪ ನಿರ್ದೇಶಕರು , ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು ಹಾಜರಿದ್ದರು ಈ ಸಂದರ್ಭದಲ್ಲಿ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಕಾಲೇಜು ಉಪನಿರ್ದೇಶಕ ಪಿ.ಐ. ಭಂಡಾರಿ ಅವರು, ಪರೀಕ್ಷೆ ಕುರಿತು ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿಕೊಂಡು ಮಾರ್ಗದರ್ಶನ ನೀಡಿದ್ದಾರೆ.

ಪರೀಕ್ಷೆಯಲ್ಲಿ ಮುಖ್ಯ ಅಧೀಕ್ಷಕರು, ಕೇಂದ್ರದ ಕಸ್ಟೊಡಿಯನ್, ಕೊಠಡಿ ಮೇಲ್ವಿಚಾರಕರು ಸೇರಿದಂತೆ ಎಲ್ಲರ ಮೇಲೆ ಸಾಕಷ್ಟು ಜವಾಬ್ದಾರಿ ಇದ್ದು ಅಚ್ಚುಕಟ್ಟಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಪರೀಕ್ಷೆಗೆ ಯಾವುದೇ ಚ್ಯುತಿ ಬರದಂತೆ ನಡೆದುಕೊಳ್ಳಬೇಕು ಹಾಗೂ ಸಿಸಿ ಕ್ಯಾಮೆರಾಗಳ ಪುಟೇಜನ್ನು ರಕ್ಷಿಸುವುದೂ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ನೀಡಿದರು.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬೆಳಗಾವಿ ಜಿಲ್ಲಾ ಪಿ ಯು ಉಪನಿರ್ದೇಶಕ ಎಂ.ಎಂ. ಕಾಂಬಳೆ,ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20ರವರೆಗೆ ನಡೆಯಲಿದ್ದು ಬೆಳಗಾವಿ ಜಿಲ್ಲೆಯಲ್ಲಿ 41 ಕೇಂದ್ರಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 55 ಒಟ್ಟು 96 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಿ ಆದೇಶಗಳನ್ನು ನೀಡಲಾಗಿದೆ ಎಲ್ಲಾ ಕೇಂದ್ರಗಳಲ್ಲಿ ಆಸನ, ನೀರು, ಗಾಳಿ ಬೆಳಕು ಹಾಗೂ ಸಿಸಿಟಿವಿ ವ್ಯವಸ್ಥೆಯನ್ನು ಮಾಡಲಾಗಿದೆ

ಪರೀಕ್ಷಾ ಮುಖ್ಯ ಅಧೀಕ್ಷರು, ಮೇಲ್ವಿಚಾರಕರು ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿ ಇದ್ದು ಪರೀಕ್ಷೆಗಳನ್ನು ಸರಿಯಾಗಿ ನಡೆಸಬೇಕೆಂದು ತಿಳಿಸಲಾಗಿದೆ ಪರೀಕ್ಷೆಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರು ವಿವಿಧ ಸಮಿತಿಗಳನ್ನು ರಚಿಸಿ ಈಗಾಗಲೇ ಆದೇಶ ನೀಡಿದ್ದಾರೆ. ಸರಿಯಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು ಇಲಾಖೆಯ ಆದೇಶದಂತೆ ಯಾವುದೇ ರೀತಿಯ ಅಡಚಣೆಗಳು ಬಾರದಂತೆ ಜವಾಬ್ದಾರಿಯಿಂದ ಎಲ್ಲರೂ ಕರ್ತವ್ಯ ನಿರ್ವಹಿಸಿ ಪರೀಕ್ಷೆಯನ್ನು ಯಶಸ್ವಿಗೊಳಿಸುತ್ತೇವೆಂದು ಹೇಳಿದರು

ರಾಜ್ಯ ಸಂಪನ್ಮೂಲ ವ್ಯಕ್ತಿ ಡಾ. ನಾಗರಾಜ್ ಮರೆನನ್ನವರ ವಿಶೇಷ ಉಪನ್ಯಾಸದ ಮೂಲಕ ಪರೀಕ್ಷೆ ಕುರಿತು ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಡಿವೈಎಸ್ಪಿ ಸುಂದರಂ, ಜಿಲ್ಲಾ ಖಜಾನೆ ಉಪ ನಿರ್ದೇಶಕಿ ವೀಣಾ ಬಿದರಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರ

Related Articles

Leave a Reply

Your email address will not be published. Required fields are marked *

Back to top button