Uncategorized
ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ; ಮೇ 12ಕ್ಕೆ ಮತ್ತೆ ಮಾತುಕತೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಮಾತುಕತೆ ಘೋಷಣೆಯಾದ ಕೆಲವೇ ಕ್ಷಣಗಳಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಎರಡೂ ದೇಶಗಳ ನಡುವೆ ನಡೆದ ಮಾತುಕತೆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 3.35ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದಾರೆ. ಭಾರತೀಯ ಸಮಯ 5 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿನ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಎರಡೂ ಕಡೆಯವರು ನಿಲ್ಲಿಸುವುದಾಗಿ ಮಿಶ್ರಿ ಖಚಿತಪಡಿಸಿದ್ದಾರೆ.