ಬೆಳಗಾವಿ

ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಿ; ಸರ್ಕಾರಕ್ಕೆ ಬೀಸಿ ಮುಟ್ಟಿಸಲು ಮುಂದಾದ ಆಶಾ ಕಾರ್ಯಕರ್ತೆಯರು…

ಬೆಳಗಾವಿ: ಅಧಿವೇಶನದಲ್ಲಿ ಸಮಯ ನೀಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯ ಕೈಗೊಂಡಿದ್ದಾರೆ.

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸದ್ಯ ನೀಡುತ್ತಿರುವ 5 ಸಾವಿರ ರೂಪಾಯಿ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ಸಮಸ್ಯೆಯಿದ್ದಾಗ ರಜೆ ನೀಡಬೇಕು. ಸೇವಾ ಭದ್ರತೆಯನ್ನ ನೀಡಬೇಕು ಸೇರಿದಂತೆ ಇನ್ನುಳಿದವ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಈ ಕುರಿತು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲು ಸಮಯ ನೀಡಲಿಲ್ಲ.

ಆದ್ದರಿಂದ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯವನ್ನು ಆಶಾ ಕಾರ್ಯಕರ್ತೆಯರು ಕೈಗೊಂಡಿದ್ದಾರೆ. ಬೆಳಗಾವಿಯಿಂದ ಇದರಲ್ಲಿ ಸುಮಾರು 3 ಸಾವಿರ ಆಶಾ ಕಾರ್ಯಕರ್ತೆಯರು ಭಾಗಿಯಾಗಲಿದ್ದಾರೆ. ಇಂದು ಬೆಳಗಾವಿಯ ಡಾ. ಅಂಬೇಡ್ಕರ ಉದ್ಯಾನದಲ್ಲಿ ಎಐಟಿಯುಸಿಯ ಪೂರ್ವಭಾವಿ ಸಭೆ ನಡೆಯಿತು. ಈ ಕುರಿತು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಗೀತಾ ಶಶಿಕಾಂತ ರಾಯಗೋಳ ಇನ್ ನ್ಯೂಸಗೆ ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ. 

Related Articles

Leave a Reply

Your email address will not be published. Required fields are marked *

Back to top button