ಬಿಜಾಪುರ
ಡಿಸಿಎಂ ಡಿಕೆಶಿ ಪ್ರತಿಕೃತಿಗೆ ಬೆಂಕಿ ಹಾಕಿದ ರೈತರು

ವಿಜಯಪುರ: ಉತ್ತರ ಕರ್ನಾಟಕ ಜೀವನಾಡಿಯಾಗಿರುವ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಿಂದ ತೆಲಂಗಾಣ ರಾಜ್ಯಕ್ಕೆ 1.27 ಟಿಎಂಸಿ ನೀರು ಹರಿಬಿಟ್ಟ ಹಿನ್ನೆಲೆ ರೊಚ್ಚಿಗೆದ್ದ ರೈತ ಪರ ಸಂಘಟನೆಗಳು, ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರದಂದು ಜಲ ಸಂಪನ್ಮೂಲ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.
ವಿಜಯಪುರ ಜಿಲ್ಲೆಯು ಭೀಕರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆ ಕುಡಿಯುವ ನೀರಿನ ಅಭಾವ ಇದೇ ಇನ್ನು ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಜನರಿಗೆ ತೊಂದರೆ ಉಂಟಾಗುತ್ತದೆ ಇಂತಹ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಿ ಕಾಂಗ್ರೆಸ್ ಆಡಳಿತ ಇರುವ ತೆಲಂಗಾಣ ರಾಜ್ಯಕ್ಕೆ ನೀರು ಹರಿಸಿದ್ದಾರೆ. ತಮ್ಮ ಆಕ್ರೋಶವನ್ನು ಹೊರ ಹಾಕಿದರು.