ಬೆಳಗಾವಿ
ಜಿಲ್ಲೆಯ ಎಲ್ಲ ಶಾಸಕ ಮಿತ್ರರು, ಸಂಸದರು, ಜನಪ್ರತಿನಿಧಿಗಳು, ನಾಗರಿಕರು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು; ಸತೀಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯ ಸಮಸ್ತ ನಾಗರೀಕರೇ,
ಭಾರತ ರಾಷ್ಟ್ರವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಗಣರಾಜ್ಯೋತ್ಸವದ ಅಮೃತ ಘಳಿಗೆಯಲ್ಲಿ ಇಂದಿನ ಸಂಭ್ರಮದಲ್ಲಿ ಭಾಗಿಯಾಗಿರುವ ಎಲ್ಲ ಹಿರಿಯರು, ಕವಿ-ಸಾಹಿತಿಗಳು, ಚಿಂತಕರು, ಜಿಲ್ಲೆಯ ಎಲ್ಲ ಶಾಸಕ ಮಿತ್ರರು, ಸಂಸದರು, ಜನಪ್ರತಿನಿಧಿಗಳು, ನಾಗರಿಕರು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಬೆಳಗಾವಿಯ ಈ ನೆಲವು ರಾಷ್ಟçಪಿತ ಮಹಾತ್ಮಾ ಗಾಂಧೀಜಿ, ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ.

ಭಾರತ ರಾಷ್ಟ್ರವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಈ ದಿನವು ದೇಶದ ನಾಗರಿಕರಿಗೆ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ “ಸಂವಿಧಾನ”ವು ಭವ್ಯಭಾರತಕ್ಕೆ ದಾರಿದೀಪವಾಗಿದೆ.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆದುಕೊಂಡ ಬಳಿಕ ಕೇವಲ 76 ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ.
ಸಾಮಾಜಿಕ ನ್ಯಾಯ, ಸರ್ವರಿಗೂ ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರö್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಕೂಡ “ಸರ್ವರಿಗೂ ಸಮಪಾಲು-ಸಮಬಾಳು” ತತ್ವದಡಿ ಕಾರ್ಯನಿರ್ವಹಿಸುತ್ತಿದೆ. ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಈ ಐದೂ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ “ನುಡಿದಂತೆ ನಡೆದಿದೆ”.
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಜರುಗಿದ “ಕಾಂಗ್ರೆಸ್ ಅಧಿವೇಶನ” ದ ಶತಮಾನೋತ್ಸವವನ್ನು ಸರಕಾರವು ಬೆಳಗಾವಿಯಲ್ಲಿ ಅತ್ಯಂತ ಸಡಗರ-ಸಂಭ್ರಮದಿAದ ಆಚರಿಸಿತು.
ಶತಮಾನೋತ್ಸವದ ಸವಿನೆನಪಿನಲ್ಲಿ ವರ್ಷವಿಡೀ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿರುವ ಸರಕಾರವು ಇದಕ್ಕಾಗಿ 25 ಕೋಟಿ ರೂಪಾಯಿ ಅನುದಾನವನ್ನು ಪ್ರಕಟಿಸಿದೆ.
ಸುಮಾರು ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಕೂಡ ಲೋಕಾರ್ಪಣೆಗೊಳಿಸಲಾಗಿದೆ.
1924 ರಲ್ಲಿ ಅಧಿವೇಶನ ಜರುಗಿದ ಟಿಳಕವಾಡಿಯ ವೀರಸೌಧ(ಕಾಂಗ್ರೆಸ್ ಬಾವಿ)ದ ಆವರಣದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣ; ನವೀಕೃತ ಫೊಟೋ ಗ್ಯಾಲರಿ ಲೋಕಾರ್ಪಣೆ; ಕಣಬರಗಿಯಲ್ಲಿ ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಮತ್ತು ಫೊಟೋ ಗ್ಯಾಲರಿ ಉದ್ಘಾಟನೆ ನೆರವೇರಿಸಲಾಗಿದೆ.
ಶತಮಾನೋತ್ಸವ ಅಂಗವಾಗಿ ಚಳಿಗಾಲ ಅಧಿವೇಶನ ಸಂಸರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಜೀವನಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನ ಇದಲ್ಲದೇ ಅಲ್ಪಾವಧಿ-ದೀರ್ಘಾವಧಿಯ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಕೈಗೆತ್ತಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡ ಕೆಲವು ಅಭಿವೃದ್ಧಿ ಕೆಲಸಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆಎಂದು ಸತೀಶ್ ಜಾರಕಿಹೊಳಿಯವರು ಇಂದು ತಮ್ಮ ಬಾಷಣದಲ್ಲಿ ಮಾತನಾಡಿದರು.