ಬಿಜಾಪುರ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌‌ನಿಂದ ಪ್ರತಿಭಟನೆ.

ವಿಜಯಪುರ : ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ ಪಕ್ಷದಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಂದು ಜೆಡಿಎಸ್‌ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ವಿಜಯಪುರ ದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಹಣವಿಲ್ಲದೆ ಪರದಾಡುತ್ತಿದೆ. ಮೂರು ತಿಂಗಳಿಂದ ಗೃಹಲಕ್ಷ್ಮಿ ಸ್ಥಗಿತವಾಗಿದೆ. ಅನ್ನಭಾಗ್ಯಕ್ಕೆ ನೀಡುವ ಅಕ್ಕಿಯೂ ಇಲ್ಲ. ಗುತ್ತಿಗೆದಾರರಿಗೆ ನೀಡಬೇಕಾದ 32 ಸಾವಿರ ಕೋಟಿ ರೂ. ಇನ್ನೂ ಬಾಕಿ ಉಳಿಸಿಕೊಂಡಿದ್ದು, ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ದೂರಿದರು.
ರೈತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ. ಬೆಳೆಗಳಿಗೆ ಉತ್ತಮ ಬೆಲೆ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದ್ದು, ಪ್ರತಿಪಕ್ಷದವರು ಮಾತ್ರವಲ್ಲದೆ ಆಡಳಿತ ಪಕ್ಷದ ಶಾಸಕರೇ ಒಪ್ಪಿಕೊಳ್ಳುತ್ತಿದ್ದಾರೆ. ಬಿಬಿಎಂಪಿ, ಮಹಾನಗರ ಪಾಲಿಕೆಗಳು, ಜಿಪಂ, ತಾಪಂ, ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತಿಲ್ಲ. ಹಳ್ಳಿ-ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹೆಚ್ಚಾಗಿದೆ ಎಂದು ಕಿಡಿಕಾರಿದರು.

Related Articles

Leave a Reply

Your email address will not be published. Required fields are marked *

Back to top button