ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಕ್ಲಿಯರ್.

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಜನವರಿ, ಫೆಬ್ರವರಿ ತಿಂಗಳ ಹಣ ಸದ್ಯದಲ್ಲೇ ಕ್ಲಿಯರ್ ಆಗಲಿದೆ. ಹತ್ತು-ಹದಿನೈದು ದಿನ ಹೆಚ್ಚುಕಡಿಮೆ ಆಗಬಹುದೇ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್ ಆಗದೇ ಉಳಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೋ ಹಾಗೆಯೇ ಮುಂದುವರಿದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ. ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್, ಡಿಸೆಂಬರ್ ತಿಂಗಳ ಹಣ ಕ್ಲಿಯರ್ ಆಗಿದೆ. ಜನವರಿ, ಫೆಬ್ರವರಿ ತಿಂಗಳ ಹಣ ಸದ್ಯದಲ್ಲೇ ಕ್ಲಿಯರ್ ಆಗಲಿದೆ. ಹತ್ತು-ಹದಿನೈದು ದಿನ ಹೆಚ್ಚುಕಡಿಮೆ ಆಗಬಹುದೇ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್ ಆಗದೇ ಉಳಿಯುವುದಿಲ್ಲ ಎಂದು ಹೇಳಿದರು