
ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ-63ರ ಯಲ್ಲಾಪುರ ತಾಲೂಕಿನ ಇಡಗುಂದಿಯ ಬಳಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ಧ ಘಟನೆ ಸೋಮವಾರ(ನ.11)ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬಲಬದಿಗೆ ಹೋಗಿ ಸುರಕ್ಷತೆಗೆ ಅಳವಡಿಸಿದ ತಡೆಬೇಲಿ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದಿದೆ.
ಲಾರಿ ಸಂಪೂರ್ಣ ಜಖಂ ಆಗಿದ್ದು,ಚಾಲಕ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.