ಬೆಳಗಾವಿ
ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು.
ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಹೊಸ ನೇತೃತ್ವವಿಗೆ ಅವಕಾಶ ನೀಡಿದೆ.
ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರು, ಮುಖಂಡರು ಮತ್ತು ಮೀನುಗಾರ ಸಹೋದ್ಯೋಗಿಗಳು ಹೊಸ ನೇತೃತ್ವಕ್ಕೆ ಶುಭಾಶಯಗಳನ್ನು ತಿಳಿಸಿದರು. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸಂಘದ ಅಭಿವೃದ್ದಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.