ಬಿಜಾಪುರ

ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ.

ವಿಜಯಪುರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಜಯಪುರ ನಗರದಲ್ಲಿ ಸ್ಥಳೀಯ ನಿರಾಶ್ರಿತರ ಕೇಂದ್ರವು ಅಚ್ಚುಕಟ್ಟಾಗಿ ಕಾರ್ಯನಿರ್ವಾಹಿಸುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಂಸೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ವತಿಯಿಂದ ಬಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ ಮೂಡಿಸುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳಲ್ಲಿ ಭಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ ವಾಹನಕ್ಕೆ ಚಾಲನೆ ನೀಡಲಾದೆ.

ಸದ್ಯ ನಗರದ ಅಫಜಲಪುರ ಟಕ್ಕೆಯಲ್ಲಿ ಇರುವ ಕೇಂದ್ರದಲ್ಲಿ 141 ನಿರಾಶ್ರಿತರು ಆಶ್ರಯ ಪಡೆದಿದ್ದಾರೆ‌. ಹೊರ ರಾಜ್ಯದ 90 ಹಾಗೂ 51 ಜನ ರಾಜ್ಯದ ನಿರಾಶ್ರಿತರ ಆಶ್ರಯ ಪಡೆದಿದ್ದಾರೆ. ಇದರಲ್ಲಿ ಕೆಲವರು‌ ಮಾನಸಿಕ ಆರೋಗ್ಯ ಸರಿಯಿಲ್ಲದವರು ಸೇರಿದ್ದಾರೆ. ನಿರಾಶ್ರಿತರಿಗೆ ಉದ್ಯೋಗ, ಪುನವರ್ಸತಿ ಒದಗಿಸಲು ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು, ನಿರಾಶ್ರಿತರ ಹಕ್ಕುಗಳು, ಅವರಿಗೆ ಮೂಲಭೂತ ಸೌಕರ್ಯಗಳ ಒದಗಿಸುವ ಕುರಿತು ಚರ್ಚಿಸಲಾಗಿದೆ. ನಿರಾಶ್ರಿತರು ಅಥವಾ ವಯಸ್ಸಾದವರು ಯಾರಾದರೂ ಇದ್ದರೆ ಸಾರ್ವಜನಿಕರು ಸಹಾಯವಾಣಿ 10581 ಗೆ ಸಂಪರ್ಕಿಸಲು ಮನವಿ ಮಾಡಿದರು. ‌

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಪಂಚಾಯತನ ಉಪ ಕಾರ್ಯರ್ದರ್ಶಿ ಅಜೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಮಾನವರ, ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಬಸವರಾಜ ನಾಟೀಕಾರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button