ಬೆಂಗಳೂರು
ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ, ಅವರು ಏನು ಮಾತನಾಡಿದ್ದಾರೆ ಗೊತ್ತಿಲ್ಲ; ಸಚಿವ:ಸತೀಶ ಜಾರಕಿಹೊಳಿ.

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೈಕಮಾಂಡ್ ಜೊತೆಗೆ ಅವರು ಏನು ಮಾತನಾಡಿದ್ದಾರೆ ಗೊತ್ತಿಲ್ಲ. ಆದರೇ ಎಲ್ಲವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದಾರೆ.
ಪವರ್ ಶೇರಿಂಗ್ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹೈಕಮಾಂಡ ಜೊತೆಗೆ ಡಿ ಕೆ ಶಿವಕುಮಾರ್ ಏನು ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಸಚಿವರುಗಳು ಶಾಸಕರುಗಳು ಹೈಕಮಾಂಡ್ ಅವರನ್ನು ಭೇಟಿಯಾಗ್ತಾರೆ. ಅವರವರ ಬೇಡಿಕೆಗಳನ್ನು ಇಡುತ್ತಾರೆ. ನಾವು ಈ ಕುರಿತು ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಎಲ್ಲವು ಪಾರ್ಟಿ ನಿರ್ಣಯ ಕೈಗೊಳ್ಳಲಿದೆ ಎಂದಿದ್ದಾರೆ.
ಇನ್ನು ರಾಜ್ಯಪಾಲರು ಬಿಲ್ ಮತ್ತೇ ವಾಪಸ್ಸು ಕಳುಹಿಸಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ಇದು ಹೊಸದೆನಲ್ಲ. ಅವರಿಗೆ ಬೇಕಾದ ಮಾಹಿತಿಯನ್ನು ನೀಡಲಾಗುವುದು. ಬಿಜೆಪಿ ಸರ್ಕಾರದಲ್ಲೇ ಅವರ ಗರ್ವನರ್ ವಾಪಸ್ಸು ಕಳುಹಿಸಿದ ಉದಾಹರಣೆಗಳಿವೆ ಎಂದರು.