ಸವದತ್ತಿ
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಜೆಸಿಬಿ ಸದ್ದು. ರಸ್ತೆ ಮೇಲಿನ ಅತಿಕ್ರಮಣ ತೆರವ

ಬೆಳಗಾವಿ : ಸವದತ್ತಿ ಪಟ್ಟಣದ ಅಭಿವೃದ್ಧಿ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗಾಗಿ ರಸ್ತೆ ಅತಿಕ್ರಮಿಸಿಕೊಂಡಿದ್ದ ಅಂಗಡಿ ಮುಂಗಟ್ಟುಗಳನ್ನು ಗುರುವಾರ ಬೆಳ್ಳಂ ಬೆಳಿಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು
ಬೆಳಗ್ಗೆ 6 ಗಂಟೆಯಿಂದಲೇ ತೆರವು ಕಾರ್ಯಾಚರಣೆ ಆರಂಭವಾಗಿತ್ತು ಪಟ್ಟಣದ ಎಪಿಎಂಸಿ ವೃತ್ತದಿಂದ ಬಸ್ ನಿಲ್ದಾಣದವರೆಗೆ ತೆರವು ಕಾರ್ಯಾಚರಣೆ ನಡೆದಿದೆ 10 ಜೆಸಿಬಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದವು. ನೂರು ಜನ ಪೊಲೀಸ್ ಸಿಬ್ಬಂದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು.
ಸವದತ್ತಿ ತಹಶಿಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ,ಸಿಪಿಐ ಧರ್ಮಾಕರ್ ಧರ್ಮಟ್ಟಿ,ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯಾ ನೇತೃತ್ವದಲ್ಲಿ ಅತಿಕ್ರಮಣ ತೆರುವು ಕಾರ್ಯಾಚರಣೆ ನಡೆಯಿತು.