ನವದೆಹಲಿ
ದೆಹಲಿಯಲ್ಲಿ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

ದೆಹಲಿ: ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸುದೀರ್ಘವಾಗಿ ಚರ್ಚೆ ನಡೆಸಿದರು
ರಾಜ್ಯದಲ್ಲಿ ನಡೆಯುತ್ತಿರುವ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳ ವೇಗ ಹೆಚ್ಚಿಸಬೇಕೆಂದು ಮನವಿ ಮಾಡಿದ್ದು, ಶಿರಾಡಿ ಘಾಟ್ ಸುರಂಗ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳ ಕುರಿತು ಚರ್ಚಿಸಿದರು.