ಬೆಂಗಳೂರು

ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಮೂರು ಸಾವಿರ ಕ್ಯೂಸೆಕ್​​​ನಂತೆ ನೀರು.

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏಪ್ರಿಲ್​ 9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್​​​ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ: ಸರ್ಕಾರದ ಮುಖ್ಯಕಾರ್ಯದರ್ಶಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ರೈತರ ಪರವಾಗಿದೆ. ಕುಡಿಯುವ ನೀರಿಗೂ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

3,000 ಕ್ಯೂಸೆಕ್ ನೀರು: ಮಾರ್ಚ್​​​ 21ರಂದು ಬೆಂಗಳೂರಿನಲ್ಲಿ ನಡೆದ ಐಸಿಸಿ ಸಲಹಾ ಸಮಿತಿ ಸಭೆಯಲ್ಲಿ, ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮೂಲಕ ಏಪ್ರಿಲ್ 9 ಅಥವಾ 10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3,000 ಕ್ಯೂಸೆಕ್​​ನಂತೆ ನೀರು ಹರಿಸಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಫಸಲಿಗಾಗಿ ಕಾಯುತ್ತಿರುವ ಬೆಳೆದು ನಿಂತ ಬೆಳೆಗಳಿಗೆ ನೀರು ಒದಗಿಸಲಾಗುವುದು. ಕೊನೆಯ ಭಾಗದ ರೈತರಿಗೆ ನೀರು ತಲುಪುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಸಚಿವ ಶಿವರಾಜ್ ಎಸ್.ತಂಗಡಗಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷೇಧಾಜ್ಞೆ ಮೂಲಕ ನೀರು ಹರಿಸಲಾಗುವುದು. ರೈತರು ಮತ್ತು ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ಇದೇ ವೇಳೆ ಭರವಸೆ ನೀಡಿದ್ದಾರೆ.‌

Related Articles

Leave a Reply

Your email address will not be published. Required fields are marked *

Back to top button