ರಾಜಕೀಯರಾಜ್ಯ

ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ; ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ, ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್​​ಆರ್​​ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಿಗೆ ತುದಿಯಲ್ಲಿ ಅಂಕಿ -ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಹೊಗಳಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳಾದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button