Uncategorized
ಶಿವಮೊಗ್ಗ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು; ಬ್ರಾಹ್ಮಣ ಸಮಾಜ ಆಕ್ರೋಶ.

ಶಿವಮೊಗ್ಗ: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ.
ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ.
ಈ ರೀತಿ ಗಾಯತ್ರಿ ದೀಕ್ಷೆ ಪಡೆದು ಆತ್ಮಸಾಕ್ಷತ್ಕಾರದ ಪರಮ ಸಂಕಲ್ಪ ಮಾಡಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅಧಿಕಾರಿಗಳು ತೆಗೆಸಿದ್ದು ಅವಮಾನಕಾರಿಯಾಗಿದೆ. ಈ ಘಟನೆ ಖಂಡನೀಯವಾಗಿದೆ ಎಂದು ಬ್ರಾಹ್ಮಣ ಸಂಘಗಳ ಒಕ್ಕೂಟ ದೂರು ನೀಡಿದೆ.