Uncategorized

ಮಾನ್ಯ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಗ್ರಾಮ ಪಂಚಾಯತಗೆ ಭೇಟಿ:

ರಾಯಬಾಗ: ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ರವರು ಇಂದು ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಜಲ್ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಮಾನ್ಯರು ಕೊಳ್ಳಿಗುಡ್ಡ ಗ್ರಾಮ ಪಂಚಾಯತಿಯ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿ ಸ್ಥಳದಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಕೂಲಿ ಕಾರ್ಮಿಕರಿಗೆ ಕೆಲವು ಸಲಹೆ, ನಿರ್ದೇಶನಗಳನ್ನು ನೀಡಿದರು.

ನಂತರ ಕಪ್ಪಲಗುದ್ದಿ ಗ್ರಾಮ ಪಂಚಾಯಯ ಸುಲ್ತಾನಪೂರ ಗ್ರಾಮಕ್ಕೆ ಭೇಟಿ ನೀಡಿ, ಜಲ್ ಜೀವನ ಮಿಷನ್ ಯೋಜನೆಯ, ಬಹು ಗ್ರಾಮೀಣ ಕುಡಿಯುವ ನೀರು ಸರಬರಾಜು,ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಕುಡಿಯುವ ನೀಡಿನ ಸಮಸ್ಯೆ ಆಗದಂತೆ ಕ್ರಮ ವಹಿಸಲು ಹಾಗೂ ಆರ್ ಓ ಪ್ಲಾಂಟ್ ಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಈ ಅವದಿಯಲ್ಲಿ ಎಲ್ಲಾ ಕೂಲಿಕಾರರಿಗೆ ಕೆಲಸ ಕೊಡಬೇಕು. ಕೆಲಸದ ಸ್ಥಳದಲ್ಲಿ ನೆರಳಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಕಡ್ಡಾಯವಾಗಿ ನಿರ್ವಹಿಸಬೇಕೆಂದು ಸೂಚಿಸಿದರು.
ನಂತರ ಪ್ರತಿಯೊಬ್ಬ ವಿಶೇಷಚೇತನರಿಗೆ ವಿಶೇಷ ಜಾಬ್‌ ಕಾರ್ಡ್ ಗಳನ್ನು ಕಡ್ಡಾಯವಾಗಿ ನೀಡಬೇಕು ಹಾಗೂ ಅವರಿಗೆ ಕೆಲಸವನ್ನು ಕೊಡಬೇಕು ಎಂದು ನಿರ್ದೇಶನ ನೀಡಿದರು.
ನಂತರ ಹೆಸ್ಕಾಂ ಬಿಲ್ ಮರು ಹೊಂದಾಣಿಕೆ ಸಂಬಂಧ ಗ್ರಾಪಂನಿಂದ ಬಂದ ಅರ್ಜಿಗಳನ್ನು ಪರಿಶೀಲನೆ ಮಾಡಿದರು.

ಬಳಿಕ ರಾಯಬಾಗ ಪಟ್ಟಣದ ಕೆ.ಇ.ಬಿ. ಸಭಾಭವನದಲ್ಲಿ ಎಲ್ಲ ತಾಲೂಕಾಮಟ್ಟದ ಅಧಿಕಾರಿಗಳುಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಸೂಚನೆ, ನಿರ್ದೇಶನಗಳನ್ನು ನೀಡಿದರು.

ಈ ಸಂದರ್ಭದಲ್ಲಿ ರಾಯಬಾಗ ಕಾರ್ಯನಿರ್ವಾಹಕ ಅಭಿಯಂತರರು ಪಾಂಡುರಂಗ ರಾವ್ ಚಿಕ್ಕೋಡಿ, ಸುಭಾಷ್ ಭಂಜತ್ರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ರಾಯಬಾಗ ತಾಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಕದ್ದು ರವರು, ರಾಯಬಾಗ ಎಇ, ಜಇ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ರವರು, ಹೆಸ್ಕಾಂ ಲೆಕ್ಕಾದಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರು (ಪಂರಾ ಹಾಗೂ ಗ್ರಾಉ) ಹಾಗೂ ತಾಪಂ ಎಲ್ಲ ಸಿಬ್ಬಂದಿ ಹಾಜರಿದ್ದರು‌.

Related Articles

Leave a Reply

Your email address will not be published. Required fields are marked *

Back to top button