
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯ ನೀತಿಯನ್ನು ಖಂಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರೂ ಆದ ಶ್ರೀ ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಾಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗಿದೆ. ಅಚ್ಛೆ ದಿನಗಳ ಬದಲಿಗೆ ಅನ್ಯಾಯದ ದಿನಗಳಾಗಿದ್ದು, ಪ್ರತಿದಿನ ಜನ ಸಾಮಾನ್ಯರು ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟವನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸದೆ, ಪ್ರತಿ ಜಿಲ್ಲೆ, ತಾಲೂಕು ಹಾಗೂ ಬ್ಲಾಕ್ ಮಟ್ಟಕ್ಕೂ ವಿಸ್ತರಿಸಬೇಕು ಎಂದು ಕರೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ನ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.