ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ.

ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ಯತ್ನಾಳ ವಿರುದ್ಧ ಇದೇ ದಿನಾಂಕ 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಯತ್ನಾಳ ಮೇಲೆ ರೌಡಿಶೀಟರ್ ಓಪನ್ ಮಾಡಬೇಕೆಂದು ಆಗ್ರಹಿಸುವುದಾಗಿ ಮುಸ್ಲಿಂ ಮುಖಂಡರು ತಿಳಿಸಿದರು.
ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಮುಸ್ಲಿಂ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಮಮ್ಮದ್ ರಫೀಕ್ ಟಪಾಲ್, ಎಮ್ ಸಿ ಮುಲ್ಲಾ ಹಾಗೂ ಇತರ ಮುಖಂಡರು ಕಳೆದ ರಾಮನವಮಿ ದಿನದಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ಬಾಳಾಠಾಕ್ರೆ ಮನೆಯಲ್ಲಿ ಪೈಗಂಬರ್ ಹುಟ್ಟಿದ್ದಾರೆ ಎಂದು ಮಾತನಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಯತ್ನಾಳ ವಿರುದ್ಧ ವಿಜಯಪುರದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಮುಸ್ಲಿಂ ಸಮಾಜದ ಮುಖಂಡರಿಂದ ಎಚ್ಚರಿಕೆ ನೀಡಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಅವರಿಗೆ ಅವಮಾನಕಾರಿಯಾಗಿ ಮಾತನಾಡಿದ್ದು ಸರಿಯಲ್ಲಾ, ಯತ್ತಾಳ ವಿರುದ್ಧ ಇದೆ ಏಪ್ರಿಲ್ 28ರಂದು ವಿಜಯಪುರ ನಗರದಲ್ಲಿ ಬೃಹತ್ ಹೋರಾಟ ಮಾಡುತ್ತೇವೆ, ಬೃಹತ್ ಪ್ರತಿಭಟನೆಯ ಮೂಲಕ ಯತ್ನಾಳಗೆ ಎಚ್ಚರಿಕೆ ನೀಡುತ್ತೇವೆ ಎಂದರು.ಅಂದು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಕೆ ಮಾಡುತ್ತೇವೆ, ಯತ್ನಾಳ ಮೇಲೆ ರೌಡಿಶೀಟರ್ ಓಪನ್ ಮಾಡಬೇಕೆಂದು ಆಗ್ರಹಿಸುವುದಾಗಿ ಹೇಳಿದರು.