
ವಿಜಯಪುರ :ಸಿಎಂರಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ; ಸಚಿವ ಎಂ.ಬಿ.ಪಾಟೀಲರಿಂದ ಅಂತಿಮ ಹಂತದ ಸಿದ್ಧತೆಗಳ ಪರಿವೀಕ್ಷಣೆ*
ಆ್ಯಂಕರ್: ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ.
ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

