
ಹಾವೇರಿ : ಹಾವೇರಿಯಲ್ಲಿಂದು ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಂದೇ ಒಂದು ಹೊಸ ಯೋಜನೆ ಜಾರಿಗೆ ತರಲಿಲ್ಲ, ಒಂದೇ ಒಂದು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿಲ್ಲ, ಶೋಷಿತರ ಹಣ ಅನ್ಯ ಕಾರ್ಯಗಳಿಗೆ ಬಳಸಿಕೊಂಡು, ಅಲ್ಪಸಂಖ್ಯಾತರ ಹೆಸರಿನಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಕೇವಲ ಮುಸಲ್ಮಾನರಿಗೆ ಮಾತ್ರ ಮೀಸಲಾತಿ ಕಲ್ಪಿಸಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೊಳಗಿದ ಜನಾಕ್ರೋಶ ಅಕ್ಷರಶಃ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪದಂತಿತ್ತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ಟಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗಳಾದ ಶ್ರೀ ಗೋವಿಂದ್ ಎಂ ಕಾರಜೋಳ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್ ರವಿ ಕುಮಾರ್, ಮಾಜಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ , ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಶ್ರೀ ಶಿವರಾಜ್ ಸಜ್ಜನ್, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಪೂಜಾರ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ತಮ್ಮೇಶ್ ಗೌಡ, ಶ್ರೀ ಶರಣು ತಳ್ಳೀಕೇರಿ, ಮುಖಂಡರಾದ ಶ್ರೀ ಭರತ್ ಬೊಮ್ಮಾಯಿ, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.