
ಬೆಳಗಾವಿ: ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ ಸಿಡಿಲಿನ ಬಡಿತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಮೃತರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಇದೇ ವೇಳೆ ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಿ, ಸರ್ಕಾರದಿಂದ ಸಿಗುವ ಪರಿಹಾರದ ಬಗ್ಗೆಯೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದರು.