ರಾಜಕೀಯರಾಜ್ಯ

ಭಾರತ ಸುಸಂಸ್ಕೃತ ರಾಷ್ಟ್ರವಾಗಲಿ: ಮಹಾಮಂತ್ರಿ ಗೋಪಾಲ

ಬೆಳಗಾವಿ: ‘ದೇಶದಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಇನ್ನೂ ರಾಮರಾಜ್ಯ ನಿರ್ಮಾಣವಾಗಬೇಕಿದೆ. ಭಾರತವನ್ನು ಸುಸಂಸ್ಕೃತ ರಾಷ್ಟ್ರವಾಗಿ ಕಟ್ಟುವ ಕೆಲಸವಾಗಬೇಕಿದೆ’ ಎಂದು ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ಸಂಯುಕ್ತ ಮಹಾಮಂತ್ರಿ ಗೋಪಾಲ ಹೇಳಿದರು.

ಲಿಂಗರಾಜ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌) ವಿಜಯದಶಮಿ ಪ್ರಯುಕ್ತ ಭಾನುವಾರ ಸಂಜೆ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

 

‘ಭಾರತದಲ್ಲಿ ಪ್ರತಿಯೊಬ್ಬರಲ್ಲಿ ರಾಷ್ಟ್ರೀಯ ಪ್ರಜ್ಞೆ ಬೆಳೆಯಬೇಕಿದೆ. ಮಾತೃಭೂಮಿ ಹಾಗೂ ಗೋವುಗಳನ್ನು ರಕ್ಷಿಸುವ ಕೆಲಸವಾಗಬೇಕಿದೆ’ ಎಂದರು.

‘ಇಂದು ಮತಾಂತರದ ಮೂಲಕ ಸಮಾಜ ಒಡೆಯುವ ಕೆಲಸವಾಗುತ್ತಿದೆ. ಪಶ್ಚಿಮ ಬಂಗಾಳದಲ್ಲಿ ದೌರ್ಜನ್ಯ ಮೆರೆದವರ ಮೇಲೆ ಯಾವ ಕ್ರಮವಾಗುತ್ತಿಲ್ಲ. ಬಾಂಗ್ಲಾದೇಶದಲ್ಲೂ ಆಕ್ರಮಣ, ಅತ್ಯಾಚಾರ ನಡೆಯುತ್ತಿವೆ. ಅನ್ಯಾಯದ ವಿರುದ್ಧ ನಾವು ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ’ ಎಂದು ತಿಳಿಸಿದರು.

ಅಖಿಲ ಭಾರತ ವೀರಶೈವ ಅಂಗಾಯತ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ‘ಸಮಾಜ ಮತ್ತು ಸಂಸ್ಕೃತಿ ಉಳಿಸಿ, ಬೆಳೆಸುವುದು ನಮ್ಮ ಜವಾಬ್ದಾರಿ. ದೇಶದಲ್ಲಿ ಆರ್‌ಎಸ್‌ಎಸ್‌ ಸಾಮರಸ್ಯ, ಬಂಧುತ್ವ ಮತ್ತು ಸಂಸ್ಕೃತಿ ಬೆಳೆಸುವ ಕೆಲಸ ಮಾಡುತ್ತಿದೆ. ಬಂಧುತ್ವದ ಮೂಲಕವೇ ಭಾರತವನ್ನು ಜಗತ್ತಿನ ಬಲಾಢ್ಯ ರಾಷ್ಟ್ರವಾಗಿಸಬೇಕಿದೆ’ ಎಂದರು.

‘ನಾವು ಶಕ್ತಿ, ಸಂಘಟನೆ ಮತ್ತು ಸಂಪನ್ಮೂಲವನ್ನು ಹೆಚ್ಚಿಸಿಕೊಳ್ಳಬೇಕಿದೆ. ಸಮೃದ್ಧ ಭಾರತ ನಿರ್ಮಾಣದಕ್ಕಾಗಿ ಪ್ರತಿಯೊಬ್ಬರೂ ಶ್ರಮವಹಿಸಿ ದುಡಿಯಬೇಕಿದೆ. ನಮ್ಮ ಬೆವರಿನ ಹನಿಯನ್ನೇ ರಾಷ್ಟ್ರಕ್ಕೆ ಕೊಡುಗೆಯಾಗಿ ಅರ್ಪಿಸಬೇಕಿದೆ’ ಎಂದು ಕರೆಕೊಟ್ಟರು.

Related Articles

Leave a Reply

Your email address will not be published. Required fields are marked *

Back to top button