Uncategorized

ಎಸ್.ಸಿ/ಎಸ್ಟಿ ಸಮುದಾಯಕ್ಕೆ ಸ್ಮಶಾನಭೂಮಿ ಒದಗಿಸಿ… ಪೌರ ಕಾರ್ಮಿಕರಿಗೆ ಭದ್ರತೆ ನೀಡುವಂತೆ ಆಗ್ರಹ…

ಬೆಳಗಾವಿ : ಬೆಳಗಾವಿಯಲ್ಲಿಂದು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು 1995, 17 ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿತ್ತು.

ಇಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು 1995, 17 ರಡಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿತ್ತು.

ಈ ವೇಳೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರು
ದೌರ್ಜನ್ಯ, ಪರಿಹಾರ ಧನ ವಿತರಣೆ, ನ್ಯೂನತೆಗಳನ್ನು ಸರಿಪಡಿಸುವುದು, ಸೌಲಭ್ಯಗಳನ್ನು ಕಲ್ಪಿಸುವುದು, ಭೂಮಿ, ಶೈಕ್ಷಣಿಕ ಸಮಸ್ಯೆಗಳು, ಸಶ್ಮಾನಭೂಮಿ, ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಭದ್ರತೆ, ಆಹಾರ ಇನ್ನುಳಿದ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಈ ವೇಳೆ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆಯಿತು.

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರಾದ ಮರೆಪ್ಪ ಅರ್ಜುನ ಗುಡೇನ್ನವರ ಅವರು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ನಿಯಮಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಉದ್ಧೇಶಗಳನ್ನು ಪೂರ್ಣಗೊಳಿಸಲು ಸಭೆಯಲ್ಲಿ ಚರ್ಚಿಸಿರುವುದಾಗಿ ತಿಳಿಸಿದರು. 

 ದಲಿತ ಮುಖಂಡ ಮಲ್ಲೇಶ ಚೌಗುಲೆ ಅವರು ಎಸ್.ಟಿ.ಪಿ.ಟಿ.ಎಸ್.ಪಿ ಹಣದ ಯೋಗ್ಯ ಬಳಕೆಯನ್ನು ಮಾಡಿ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿಯನ್ನು ಕೈಗೊಳ್ಳಬೇಕು. ಪೌರ ಕಾರ್ಮಿಕರಿಗೆ ಗ್ಲೌಸ್, ನಾಷ್ಟಾ ವಿತರಣೆ, ಭದ್ರತೆ ಕುರಿತು ಚರ್ಚಿಸಲಾಗಿದೆ. ಅಲ್ಲದೇ ಸ್ಮಶಾನಭೂಮಿ, ಭೂಮಿ ನೀಡುವ ಕುರಿತು ಚರ್ಚಿಸಲಾಗಿದೆ ಎಂದರು.

ಈ ವೇಳೆ ವೇದಿಕೆಯ ಮೇಲೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟೀನ್ ಮಾರ್ಬನ್ಯಾಂಗ್, ಡಿಸಿಪಿ ರೋಹನ್ ಜಗದೀಶ್ ಸೇರಿದಂತೆ ಇನ್ನುಳಿದ ಅಧಿಕಾರಿಗಳು ಉಪಸ್ಥಿತರಿದ್ಧರು.

Related Articles

Leave a Reply

Your email address will not be published. Required fields are marked *

Back to top button