ಎಸ್. ನಿಜಲಿಂಗಪ್ಪ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾಕೂಟದ ಸಮಾರೋಪ ಸಮಾರಂಭ.

ಎಸ್ ನಿಜಲಿಂಗಪ್ಪ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ 2024- 25 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮಂಗಳವಾರ ಜರುಗಿತು.
ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್ ಕಾಮಗೌಡ ಅವರು ಮಾತನಾಡಿ ಮನಸ್ಸಿದರೆ ಮಾರ್ಗ ಎಲ್ಲಾ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆದರ್ಶಗಳನ್ನು ಅಳವಡಿಸಿಕೊಂಡು ತಮ್ಮ ಗುರಿ ಮುಟ್ಟಿ ಎಂದು ಹೇಳಿ ಹುಮಸ್ಸು ತುಂಬಿದರು. ಮತ್ತೋರ್ವ ಅತಿಥಿಗಳಾದ ಡಾ.ಚೇತನಾ ಪಾಟೀಲ್, ಜಂಟಿ ಕೃಷಿ ನಿರ್ದೇಶಕರು ಎಸ್.ಎನ್.ಎಸ್ ಆಯ ಬೆಳಗಾವಿ ಇವರು ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿ. ಬಿ. ಪಾಟಿಲ್ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂಬರುವ ಉದ್ಯೋಗ ಅವಕಾಶಗಳ ಕುರಿತು ಹೇಳಿದರು. ಮಹಾವಿದ್ಯಾಲಯದ ಉಪನ್ಯಾಸಕಿಯಾದ ಸಾಧನಾ ಬ.ಮಾಲೆದ ಸ್ವಾಗತ ಮಾಡಿದರು. ಭಾಗ್ಯಶ್ರೀ ಬೀಡಿಕರ್ ಪ್ರಾರ್ಥನಾ ಗೀತೆ ಹಾಡಿದರು. ಅನ್ನಪೂರ್ಣಾ ಕೆಂಚನಗೌಡ ಇವರು ಅತಿಥಿಗಳ ಪರಿಚಯ ಮಾಡಿದರು. ಸಂಯೋಜಕರಾದ ಡಾ. ಜಗದೀಶ್ ಹಿರೇಮಠ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ನಿಕಿಲ್ ಕದಮ್ ವಂದನಾರ್ಪಣೆ ಮಾಡಿದರು. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಮಣಿಕಂಠ ಮಠಪತಿ ಹಾಗೂ ಬಸವರಾಜ ಕಾಬಾಡಿ ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಉಪನ್ಯಾಸಕಿಯಾದ ಡಾ. ರತ್ನಶ್ರೀ ಪುತಲೆಕರ ನಿರೂಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.